ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬಾರದು ಎಂದು ಪಕ್ಷದ ಹೈಕಮಾಂಡ್ ಕರ್ನಾಟಕ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದೆ. ಆದ್ದರಿಂದ, ಕಾಂಗ್ರೆಸ್ ಶಾಸಕರನ್ನು ಖರ್ಗೆ ವಿರುದ್ಧ ಕಣಕ್ಕಿಳಿಸಲು ಬಿಜೆಪಿ ತಂತ್ರ ರೂಪಿಸಿದೆ.
ಅಚ್ಚರಿಯ ಸಂಗತಿಯಾದರೂ ಇದು ಸತ್ಯ. ಈಗಾಲೇ ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದೂ ಆಗಿದೆ. ಅದನ್ನು ಅವರು ನಯವಾಗಿ ತಿರಸ್ಕರಿಸಿದ್ದೂ ಆಗಿದೆ. ಆದರೆ, ಖರ್ಗೆ ಸೋಲಿಸಲು ಬಿಜೆಪಿ ತಂತ್ರ ಮಾಡುತ್ತಿರುವುದಂತೂ ಗುಟ್ಟಾಗಿ ಉಳಿದಿಲ್ಲ.
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಲಬುರಗಿ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ತಂತ್ರ ರೂಪಿಸಿತ್ತು. ಆದರೆ, ಇದಕ್ಕೆ ಪ್ರಾಥಮಿಕ ಹಂತದಲ್ಲಿಯೇ ವಿಘ್ನ ಎದುರಾಗಿದೆ.
2 ಬಾರಿ ಲೋಕಸಭೆಗೆ, 9 ಬಾರಿ ವಿಧಾನಸಭೆಗೆ ಆರಿಸಿ ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಹುದ್ದೆಯಲ್ಲಿರುವ ಅವರನ್ನು ಸೋಲಿಸಿ ಪಕ್ಷಕ್ಕೆ ಮುಖಭಂಗ ಉಂಟು ಮಾಡುವುದು ಬಿಜೆಪಿಯ ಗುರಿಯಾಗಿದೆ....
ಡಾ.ಉಮೇಶ್ ಜಾಧವ್
ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು 2019ರ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಕಣಕ್ಕಿಳಿಸುವುದು ಬಿಜೆಪಿ ತಂತ್ರವಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಉಮೇಶ್ ಜಾಧವ್ ಅವರು 73,905 ಮತಗಳನ್ನು ಪಡೆದು
ಗೆಲುವು ಸಾಧಿಸಿದ್ದಾರೆ
ಬಿಜೆಪಿಗೆ ಹೋಗಲ್ಲ ಅಂದ್ರು ಶಾಸಕರು
ಬಿಜೆಪಿ ಉಮೇಶ್ ಜಾಧವ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಕೇವಲ ತಂತ್ರ ರೂಪಿಸಿಲ್ಲ. ಪಕ್ಷಕ್ಕೆ ಅವರನ್ನು ಆಹ್ವಾನಿಸಿದೆ. ಮಾಧ್ಯಮಗಳ ಜೊತೆ ಮಾತನಾಡಿರುವ ಉಮೇಶ್ ಜಾಧವ್ ಅವರು, 'ಬಿಜೆಪಿಯಿಂದ ನನಗೆ ಆಹ್ವಾನ ಬಂದಿತ್ತು. ಕಾಂಗ್ರೆಸ್‌ನಲ್ಲಿ ನಿಮಗೆ ಸಚಿವ ಸ್ಥಾನ, ನಿಗಮ/ಮಂಡಳಿ ಅಧ್ಯಕ್ಷ ಸ್ಥಾನ ಸಿಗುವುದಿಲ್ಲ. ಪಕ್ಷಕ್ಕೆ ಬನ್ನಿ ಎಂದು ಆಹ್ವಾನಿಸಿದೆ. ಆದರೆ, ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು ಅವರ ವಿರುದ್ದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.



Comments
Post a Comment